ದಾವಣಗೆರೆ: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಾತಿ ಕೆರೆಗೆ ಬಿದ್ದಿರುವ ಘಟನೆ ನಡೆದಿದೆ. ಕಾರು ನಿಯಂತ್ರಣ ತಪ್ಪುತ್ತಿದ್ದಂತೆ ಪಕ್ಕಕ್ಕೆ ಜಿಗಿದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ದಾವಣಗೆರೆಯಿಂದ ಹರಿಹರ ಕಡೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಎದುರಿಗೆ ಬಂದ ಬಸ್‌ಗೆ ದಾರಿ ಬಿಡಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಕ್ರೇನ್ ಮೂಲಕ ಕಾರನ್ನು ಬಾತಿ ಕೆರೆಯಿಂದ ಹೊರಕ್ಕೆ ತೆಗೆಯಲಾಯಿತು. ಬಾತಿ ಕೆರೆ ಏರಿಯಾ ಮೇಲೆ ರಸ್ತೆ ಕಾಮಗಾರಿ ನಡೆಯುತ್ತಿದೆ. ದಾವಣಗೆರೆ-ಹರಿಹರ ಮಾರ್ಗವಾಗಿ ಓಡಾಡುವ ವಾಹನ ಸವಾರರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ.



