ದಾವಣಗೆರೆ: ಜಿಲ್ಲೆಯ ಹುಣಸೆಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಹೊತ್ತಿ ಉರಿದಿದೆ. ಅದೃಷ್ಟವಶಾತ್ ನಾಲ್ವರು ಪಾರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಆಂಧ್ರಪ್ರದೇಶದಿಂದ ಗೋವಾ ಕಡೆ ತೆರಳುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಇಳಿದಿದ್ದಾರೆ. ನೋಡಾ ನೋಡುತ್ತಲೇ ಕಾರು ಹೊತ್ತಿ ಉರಿದೆ. ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ.



