Connect with us

Dvgsuddi Kannada | online news portal | Kannada news online

ದಾವಣಗೆರೆ: ಕಳ್ಳತವಾಗಿದ್ದ 18 ಮೊಬೈಲ್ CEIR ವೆಬ್ ಪೋರ್ಟಲ್ ಮೂಲಕ ಪತ್ತೆ;‌ ನಿಮ್ಮ ಮೊಬೈಲ್ ಕಳವಾಗಿದ್ದರೆ ಕೂಡಲೇ ಈ ಕಾರ್ಯ ಮಾಡಿ..!

ದಾವಣಗೆರೆ

ದಾವಣಗೆರೆ: ಕಳ್ಳತವಾಗಿದ್ದ 18 ಮೊಬೈಲ್ CEIR ವೆಬ್ ಪೋರ್ಟಲ್ ಮೂಲಕ ಪತ್ತೆ;‌ ನಿಮ್ಮ ಮೊಬೈಲ್ ಕಳವಾಗಿದ್ದರೆ ಕೂಡಲೇ ಈ ಕಾರ್ಯ ಮಾಡಿ..!

ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ CEIR ವೆಬ್ ಪೋರ್ಟಲ್ ಮೂಲಕ ಜಿಲ್ಲೆಯಲ್ಲಿ ಕಳ್ಳತನವಾಗಿದ್ದ 18 ವಿವಿಧ ಕಂಪನಿಯ ಮೊಬೈಲ್ ಗಳು ಪತ್ತೆಯಾಗಿವೆ.

ದಾವಣಗೆರೆ ಜಿಲ್ಲೆಯಲ್ಲಿ ಮೊಬೈಲ್ ಕಳೆದುಕೊಂಡವರು ಕೂಡಲೇ ನೂತನ CEIR ಪೋರ್ಟಲ್ ( ಕಳುವಾದ, ಸುಲಿಗೆಯಾದ, ಕಾಣೆಯಾದ ಮೊಬೈಲ್ ಗಳ ಬ್ಲಾಕ್ ಮಾಡಲು ಕೇಂದ್ರ ಟೆಲಿ ಕಮ್ಯುನಿಕೇಶನ್ ಇಲಾಖೆಯಿಂದ ಜಾರಿಗೆ ತಂದಿರುವ ನೂತನ ವ್ಯವಸ್ಥೆ ) ಗೆ ಭೇಟಿ ನೀಡಿ ತಮ್ಮ ಮೊಬೈಲ್ ನ ಸಂಪೂರ್ಣ ಮಾಹಿತಿ ನೀಡಿ ನೊಂದಾಯಿಸಿಕೊಳ್ಳಬೇಕು. ತಮ್ಮ ಮೊಬೈಲ್ ಅನ್ನು ಬ್ಲಾಕ್ ಮಾಡಿ, ನಂತರ ಮೊಬೈಲ್ ಗಳನ್ನು ದಾವಣಗೆರೆ ಪೊಲೀಸರು ನೂತನ CEIR ವೆಬ್ ಪೋರ್ಟಲ್ ಮೂಲಕ ಪತ್ತೆ ಮಾಡುತ್ತಾರೆ.

ಇದೂಗ ನೂತನ CEIR ವೆಬ್ ಪೋರ್ಟಲ್ ಮೂಲಕ ಒಟ್ಟು 18 ವಿವಿಧ ಕಂಪನಿಯ ಮೊಬೈಲ್ ಗಳು ಪತ್ತೆಯಾಗಿರುತ್ತವೆ. ಇವತ್ತು (ಮಾ.20) ಎಸ್ಪಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ. ಬಿ. ರಿಷ್ಯಂತ್ ಮೊಬೈಲ್ ವಾರಸುದಾರರಿಗೆ ಪತ್ತೆಯಾದ ಮೊಬೈಲ್ ಗಳನ್ನು ಮರಳಿಸಿದರು. ಈ ಸಂಧರ್ಭದಲ್ಲಿ ಸಿ ಇ ಎನ್ ಪೊಲೀಸ್ ಠಾಣೆಯ ಪಿಐ ಮಂಜುನಾಥ , ಜಿಲ್ಲಾ ಪೊಲೀಸ್ ಕಛೇರಿ ಸಿಬ್ಬಂದಿಯವರಾದ ರಾಘವೇಂದ್ರ, ಶಾಂತಕುಮಾರ್ ಉಪಸ್ಥಿತರಿದ್ದರು.

ಸಾರ್ವಜನಿಕರು ತಮ್ಮ ಮೊಬೈಲ್ ಕಳುವಾದಲ್ಲಿ/ ಸುಲಿಗೆಯಾಗಿದ್ದಲ್ಲಿ/ ಕಾಣೆಯಾಗಿದ್ದಲ್ಲಿ ಕೂಡಲೇ ನೂತನ CEIR ವೆಬ್ ಪೋರ್ಟಲ್ ಗೆ ಬೇಟಿ ನೀಡಿ ನೋಂದಾಯಿಸಲು ಹಾಗೂ ಇದರ ಸದುಪಯೋಗ ಪಡೆಯಲು ಈ ಮೂಲಕ ತಿಳಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top