ದಾವಣಗೆರೆ: ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯದ ವತಿಯಿಂದ ದಾವಣಗೆರೆಯಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರ (center of excellence) ತೆರೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಜಿಎಂ ಸಿದ್ದೇಶ್ವರ ಹೇಳಿದರು.
ಈಗಾಗಲೇ ಸಾಫ್ಟ್‍ವೇರ್ ಟೆಕ್ನಾಲಜಿ ಪಾರ್ಕ್ ಅಫ್ ಇಂಡಿಯಾದ ಉಪಕೇಂದ್ರ ಏಪ್ರಿಲ್ ತಿಂಗಳಲ್ಲಿ ಉದ್ಘಾಟನೆಯಾಗಿ ಕಾರ್ಯ ಪ್ರಾರಂಭ ಮಾಡಲಿದೆ. ಇದರ ಜೊತೆಗೆ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರವನ್ನೂ ಸಹ ತರಲು ಪ್ರಸ್ಥಾವನೆ ಸಿದ್ದಪಡಿಸಲು ಸೂಚನೆ ನೀಡಿದ್ದೇನೆ. ಎಸ್.ಟಿ.ಪಿ.ಐ. ಬೆಂಗಳೂರಿನ ಹಿರಿಯ ನಿರ್ದೇಶಕರಾದ ಶೈಲೇಂದ್ರ ತ್ಯಾಗಿಯವರು ಪ್ರಸ್ಥಾವನೆ ಸಿದ್ದಪಡಿಸಲು ಸಹಮತ ವ್ಯಕ್ತಪಡಿಸಿದ್ದಾರೆ. ಉದಯೋನ್ಮುಖ ಸ್ಟಾರ್ಟ್‍ಆಫ್ ಗಳಿಗೆ ಮೂಲಸೌಕರ್ಯ, ಸಂಪನ್ಮೂಲಗಳು, ತರಬೇತಿ, ಮಾರ್ಗದರ್ಶನ, ತಂತ್ರಜ್ಞಾನ ಬೆಂಬಲ ಮತ್ತು ಧನಸಹಾಯವನ್ನು ಒದಗಿಸುವ ಗುರಿಯೊಂದಿಗೆ ಸೆಂಟರ್ ಆಪ್ ಎಕ್ಸಲೆನ್ಸ್ ಸ್ಥಾಪನೆ ಮಾಡುವ ಉದ್ದೇಶವಿದೆ ಎಂದು ಮಾಹಿತಿ ನೀಡಿದರು.



