Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯ ಬರಪರಿಸ್ಥಿತಿ ವಾಸ್ತವ ವರದಿ ಸರ್ಕಾರಕ್ಕೆ ಸಲ್ಲಿಕೆ; ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್

ದಾವಣಗೆರೆ

ದಾವಣಗೆರೆ: ಜಿಲ್ಲೆಯ ಬರಪರಿಸ್ಥಿತಿ ವಾಸ್ತವ ವರದಿ ಸರ್ಕಾರಕ್ಕೆ ಸಲ್ಲಿಕೆ; ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್

ದಾವಣಗೆರೆ: ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲೆಯ ಬರಪರಿಸ್ಥಿತಿಯ ವಾಸ್ತವ ಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನ ಮೂರನೇ ತಂಡದ ನೇತೃತ್ವವಹಿಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.

ಜಿಲ್ಲೆಯ ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾದ ಬೆಳೆ ಹಾನಿ ವೀಕ್ಷಣೆ ಮಾಡಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.ಈಗಾಗಲೇ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಬರ ಅಧ್ಯಯನ ಕಾರ್ಯಕೈಗೊಂಡು, ಶನಿವಾರ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯ ಅಧ್ಯಯನ ಮಾಡಲಾಗುತ್ತಿದೆ.

ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ರೈತರೊಂದಿಗೆ ಸಂವಾದ ನಡೆಸಿ, ಮಾಹಿತಿ ಪಡೆಯಲಾಗುತ್ತಿದೆ. ಇದರ ಜೊತೆಗೆ ಜಿಲ್ಲಾಡಳಿತವು ಸಹ ಬರದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ತಿಳಿಸಿದ ಅವರು, ಜಿಲ್ಲೆಯ ವಾಸ್ತವ ಸ್ಥಿತಿಯ ವರದಿಯನ್ನು ರಾಜ್ಯದ ಬರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರಿಗೆ ಸಲ್ಲಿಸಲಾಗುವುದು. ಬಳಿಕ ರಾಜ್ಯದ ಸಂಗ್ರಹಿತ ಕ್ರೋಢೀಕೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top