Connect with us

Dvgsuddi Kannada | online news portal | Kannada news online

ದಾವಣಗೆರೆ : ಏ‌. 16, 17 ರಂದು ಸಿಇಟಿ ಪರೀಕ್ಷೆ; ಜಿಲ್ಲೆಯಲ್ಲಿ 28 ಕೇಂದ್ರಗಳಲ್ಲಿ ಪರೀಕ್ಷೆ- ಈ ನಿಯಮ ಪಾಲನೆ ಕಡ್ಡಾಯ

ದಾವಣಗೆರೆ

ದಾವಣಗೆರೆ : ಏ‌. 16, 17 ರಂದು ಸಿಇಟಿ ಪರೀಕ್ಷೆ; ಜಿಲ್ಲೆಯಲ್ಲಿ 28 ಕೇಂದ್ರಗಳಲ್ಲಿ ಪರೀಕ್ಷೆ- ಈ ನಿಯಮ ಪಾಲನೆ ಕಡ್ಡಾಯ

ದಾವಣಗೆರೆ: ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಿಇಟಿ ಪರೀಕ್ಷಾಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್ 16 ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏ.17 ರಂದು ಬೆಳಗ್ಗೆ 10.30 ರಿಂದ 11.50 ರ ವರೆಗೆ ಗಣಿತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಷಯಗಳು 60 ಅಂಕಗಳಿಗೆ ಸೀಮಿತವಾಗಿರುತ್ತದೆ. ದಾವಣಗೆರೆ ನಗರದಲ್ಲಿನ 28 ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟು 12875 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದಾರೆ.

ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ; ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಬೇಕು, ಜೊತೆಗೆ ಗಾಳಿ, ಬೆಳಕು ಸರಿಯಾಗಿರಬೇಕು. ಕೆಲವು ಕಾಲೇಜುಗಳಲ್ಲಿ ಶೌಚಾಲಯದ ಬಳಿ ಇರುವ ಕೊಠಡಿಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದರು.

ವಶ್ತ್ರಸಂಹಿತೆ; ಸಿಇಟಿ-2025 ಬರೆಯುವ ಪುರುಷ, ಮಹಿಳೆಯರು ವಸ್ತ್ರಸಂಹಿತೆ ಪರಿಪಾಲನೆ ಮಾಡಬೇಕು. ಪುರುಷ ಅಭ್ಯರ್ಥಿಗಳು; ಪರೀಕ್ಷಾ ದಿನದಂದು ಪೂರ್ಣತೋಳಿನ ಶರ್ಟ್‍ಗಳನ್ನು ಅನುಮತಿಸಲಾಗುವುದಿಲ್ಲ, ಅರ್ಧತೋಳಿನ ಶರ್ಟ್‍ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಸಾಧಾರಣ ಶರ್ಟ್, ಟೀ ಶರ್ಟ್ ಧರಿಸಬೇಕು. ಕುರ್ತಾ ಪೈಜಾನು, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಜೇಬುಗಳು ಇಲ್ಲದಿರುವ, ಕಮ್ಮಿಜೇಬಿಗಳಿರುವ ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಧರಿಸಬೇಕು. ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೆಟ್‍ಗಳು, ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಬಟ್ಟೆಗಳಿರಬಾರದು. ಪರೀಕ್ಷಾ ಕೊಠಡಿಯಲ್ಲಿ ಶೂಗಳು ನಿಷಿದ್ದವಾಗಿದ್ದು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗದ ಚಪ್ಪಲಿಗಳನ್ನು ಧರಿಸಬೇಕು. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರುಗಳು, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳು; ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳ ಧರಿಸುವುದು ನಿಷಿದ್ದ, ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ವಸ್ತ್ರ ಸಂಹಿತೆಯಂತೆ ಬಟ್ಟೆ ಧರಿಸಬೇಕು. ಹೀಲ್ಡ್ ಚಪ್ಪಲಿ, ಶೂಗಳನ್ನು ಧರಿಸಬಾರದು, ತೆಳುವಾದ ಅಡಿಪಾಯವಿರುವ ಚಪ್ಪಲಿ ಧರಿಸಬೇಕು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.

ಎಲೆಕ್ಟ್ರಾನಿಕ್ಸ್ ವಸ್ತುಗಳ ನಿಷೇಧ; ಡ್ರೆಸ್ ಕೋಡ್ ಜೊತೆಗೆ ಎಲೆಕ್ಟ್ರಾನಿಕ್ಸ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂಥ್, ಕೈ ಗಡಿಯಾರಗಳನ್ನು ಕೊಠಡಿಗೆ ತರುವಂತಿಲ್ಲ. ತಿನ್ನಬಹುದಾದ ವಸ್ತುಗಳನ್ನು ತರುವಂತಿಲ್ಲ, ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಅನುಮತಿ ಇಲ್ಲ, ಕೇಂದ್ರದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.
ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ ಹಾಗೂ ಮುಖಮುಚ್ಚುವಂತ ಮಾಸ್ಕ್ ಧರಿಸುವಂತಿಲ್ಲ.

ಅನುಮತಿಸಲಾದ ವಸ್ತುಗಳು; ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ಪರೀಕ್ಷಾ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಪರೀಕ್ಷಾ ಕೇಂದ್ರ ಪ್ರವೇಶ ಅವಧಿ; ಅಭ್ಯರ್ಥಿಗಳು ಕೇಂದ್ರದೊಳಗೆ ಕನಿಷ್ಠ ಮೊದಲ ಬೆಲ್ ಆಗುವ 2 ಗಂಟೆ ಮುಂಚಿತವಾಗಿ ಹಾಜರಿರಬೇಕು. ಕೇಂದ್ರದಲ್ಲಿ ಕೊಠಡಿ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಮುಖವನ್ನಾಧರಿಸಿ ಆಫ್ ಮೂಲಕ ಗುರುತು ಪತ್ತೆ ಮಾಡುವ ಕಾರ್ಯ ನಡೆಯಲಿದೆ. ಮತ್ತು ಎಲ್ಲಾ ಅಭ್ಯರ್ಥಿಗಳ ಸಂಪೂರ್ಣ ತಪಾಸಣೆ ನಡೆಯುವುದರಿಂದ ಮೊದಲ ಬೆಲೆ ಆಗುವ ಮುನ್ನ 2 ಗಂಟೆಗಳ ಕಾಲ ಮುಂಚಿತವಾಗಿ ಕೇಂದ್ರದಲ್ಲಿರಬೇಕು. ಬೆಳಗ್ಗೆ 10.20 ಕ್ಕೆ ಮತ್ತು ಮಧ್ಯಾಹ್ನ 2.20 ಕ್ಕೆ ಮೊದಲ ಬೆಲೆ ಆಗಲಿದೆ. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ಎಲ್ಲಾ ಕಾಲೇಜಿನ ಪ್ರಾಂಶುಪಾಲರು, ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top