ದಾವಣಗೆರೆ: ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಸಲಕರಣೆ, ಪೀಠೋಪಕರಣ ಖರೀದಿ ಹಾಗೂ ಕಟ್ಟಡ ನವೀಕರಣಕ್ಕೆ 31 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿಸಲು ಆರೋಗ್ಯ ರಕ್ಷಾ ಸಮಿತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆನಡೆಯಿತು. ಇದೇ ವೇಳೆ ಸ್ಟಾಫ್ ನರ್ಸ್ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಯಿತು. ಪ್ರಸ್ತುತ 135 ಸ್ಟಾಫ್ ನರ್ಸ್‌ಗಳಿದ್ದು, 455 ನರ್ಸ್ ನೇಮಕಾತಿ ಮಾಡಿಕೊಳ್ಳಬೇಕಿದೆ. 29 ಎಕರೆ ವಿಸ್ತೀರ್ಣ ಹೊಂದಿರುವ ಜಿಲ್ಲಾ ಆಸ್ಪತ್ರೆ 930 ಒಳರೋಗಿಗಳ ಹಾಸಿಗೆ ಸಾಮರ್ಥ್ಯ ಹೊಂದಿದೆ. ಕೊಠಡಿಗಳ ದುರಸ್ತಿ , ಬೆಡ್, ಪೀಠೋಪಕರಣ, ವೈದ್ಯಕೀಯ ಸಲಕರಣೆಗೆ 31 ಕೋಟಿ ಅನುದಾನದ ಅಗತ್ಯವಿದೆ ಎಂದು ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಷಣ್ಮುಖಪ್ಪ ಹೇಳಿದರು.
ಮಕ್ಕಳ ಆಸ್ಪತ್ರೆಯ ಅಧೀಕ್ಷಕ ಡಾ. ಮಧು ಮಾತನಾಡಿ, ಮಾರ್ಕೆಟ್ ಬಳಿಯ ಹೆರಿಗೆ ಆಸ್ಪತ್ರೆಗೆ ಲಿಫ್ಟ್ ಅವಶ್ಯವಿದೆ. ಆಸ್ಪತ್ರೆಯ ಪ್ರಯೋಗ ಶಾಲೆಗೆ ಸಿಬಿಸಿ ಸಿಸ್ ಮ್ಯಾಕ್ಸ್ ಯಂತ್ರ ಅಳವಡಿಕೆ ಸೇರಿದಂತೆ ವೈದ್ಯಕೀಯ ಸಲಕರಣೆ, ಪೀಠೋಪಕರಣಕ್ಕೆ ಅನುದಾನ ಅವಶ್ಯಕತೆ ಇದೆ ಎಂದರು.
ಈ ಸಂದರಗಭದಲ್ಲಿ ವಿಧಾನಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್, ಮೇಯರ್ ಜಯಮ್ಮ ಗೋಪಿನಾಯ್ಕ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎ. ಚನ್ನಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಡಿಎಚ್‌ಒ ಡಾ. ನಾಗರಾಜ, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಪಾಲಿಕೆ ಆಯುಕ್ತರಾದ ರೇಣುಕಾ ಇದ್ದರು.



