ದಾವಣಗೆರೆ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಹಿಂಬದಿಯಿಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೊಂಡದಹಳ್ಳಿಯಲ್ಲಿ ನಡೆದಿದೆ.
ಕೆ.ಪಿ.ಸ್ವಾಮೀ (18) ಮೃತ ಯುವಕನಾಗಿದ್ದಾನೆ. ಯುವಕ ಕ್ರಿಕೆಟ್ ಆಟವಾಡಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದಿದೆ. ತಲೆಗೆ ಬಲವಾದ ಪೆಟ್ಟಾಗಿ ಸ್ಥಳದಲ್ಲಿಯೇ ಯುವಕ ಸಾವನ್ನಪ್ಪಿದ್ದಾನೆ. ಟ್ರಾಕ್ಟರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.