ದಾವಣಗೆರೆ; ಚನ್ನಗಿರಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಡಾಳ್ ಮಲ್ಲಿಕಾರ್ಜುನ ಗೆಲುವಿಗಾಗಿ ಅವರ ಅಭಿಮಾನಿಗಳಿಬ್ಬರು ಚನ್ನಗಿರಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದಾರೆ.
ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ಕುಮಾರ್ ಹಾಗೂ ಶಿವಣ್ಣ ಪಾದಯಾತ್ರೆ ಹೊರಟ ಅಭಿಮಾನಿಗಳಾಗಿದ್ದಾರೆ. ಚನ್ನಗಿರಿಯಿಂದ 150 ಕಿ.ಮೀ. ದೂರ ಪಾದಯಾತ್ರೆ ಮೂಲಕ ಧರ್ಮಸ್ಥಳ ತಲುಪಿ, ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಗೆಲುವಿಗಾಗಿ ಪೂಜೆ ಸಲ್ಲಿಸಲಾಗುವುದು ಎಂದು ಅಭಿಮಾನಿಗಳು ತಿಳಿಸಿದ್ದಾರೆ.
ಭ್ರಷ್ಟಾಚಾರ ಆರೋಪ ಹಿನ್ನೆಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜನಗೆ ಬಿಜೆಪಿ ಟಿಕೆಟ್ ತಪ್ಪಿದೆ. ಈ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಮಾಡಾಳ್ ವಿರೂಪಾಕ್ಷ ಇನ್ನೊಬ್ಬ ಪುತ್ರ 40 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದನು. ಹೀಗಾಗಿ ಪಕ್ಷೇತರವಾಗಿ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷ ಉಚ್ಚಾಟಿಸಿದೆ.



