ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಜೋಳದಹಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ ಒಟ್ಟು 44ಕ್ಕೆ ಅಸ್ವಸ್ಥಗೊಂಡಿದ್ದಾರೆ.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಶುಕ್ರವಾರ 27, 17 ಮಂದಿ ಅಸ್ವಸ್ಥರಾಗಿದ್ದರು. ಎಲ್ಲರಿಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ 15 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಚರಂಡಿಗಳಲ್ಲಿ ಕುಡಿಯುವ ನೀರಿನ ಪೈಪ್‌ಗಳನ್ನು ಅಳವಡಿಸಿರುವುದು ಕಂಡು ಬಂದಿದೆ. ಪೈಪ್‌ಗಳು ಒಡೆದು, ಕಲುಷಿತ ನೀರು ಕುಡಿಯುವ ನೀರಿನಲ್ಲಿ ಸೇರಿರುವ ಸಾಧ್ಯತೆ ಇದೆ. ಚರಂಡಿಗಳಲ್ಲಿನ ಪೈಪ್‌ಗಳನ್ನು ತೆಗೆದು, ಹೊರ ಭಾಗದಲ್ಲಿ ಹೊಸದಾಗಿ ಪೈಪ್ ಅಳವಡಿಸಲು ಸೂಚಿಸಲಾಗಿದೆ. ಗ್ರಾಮದಲ್ಲಿನ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಎಚ್ಚರಿಸಿದರು.



