ದಾವಣಗೆರೆ: ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಸವರಾಜ್ ಶಿವಗಂಗಾ ಅವರಿಗೆ ಎಐಸಿಸಿ ಘೋಷಣೆ ಮಾಡಿದೆ. ಇದರಿಂದ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಶಾಸಕ ವಡ್ನಾಳ್ ರಾಜಣ್ಣ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚನ್ನಗಿರಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಡ್ನಾಳ್ ರಾಜಣ್ಣಗೆ ಟಿಕೆಟ್ ಘೋಷಣೆ ಮಾಡಿ ಹೋಗಿದ್ದರು. ಈ ಬಾರಿ ವಡ್ನಾಳ್ ರಾಜಣ್ಣ ಸಹೋದರನ ಪುತ್ರ ವಡ್ನಾಳ್ ಆಶೋಕ್‌ಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿತ್ತು. ಆದರೆ, ಟಿಕೆಟ್ ಬೇರೆಯವರ ಪಾಲಾಗಿರುವುದು ಈಗ ಕಾಂಗ್ರೆಸ್ ಪಾಳೆಯದಲ್ಲಿ ಆಕ್ರೋಶ ಮಡುಗಟ್ಟಿದೆ.



