ದಾವಣಗೆರೆ: ಇತ್ತೀಚಿಗೆ ಚನ್ನಗಿರಿ ಪೊಲೀಸ್ ಠಾಣೆಯ ಮುಂದೆ ನಡೆದ ಪ್ರತಿಭಟನೆಯ ವೇಳೆ ಕೆಲ ಯುವಕರು ‘ಪಾಕಿಸ್ತಾನ ಜಿಂದಾಬಾದ್ ‘ ಎಂದು ಘೋಷಣೆ ಕೂಗಿರುತ್ತಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬಗ್ಗೆ ಜಿಲ್ಲಾ ಪೊಲೀಸ್ ಸ್ಪಷ್ಟನೆ ನೀಡಿದೆ.
ಮೇಲ್ನೋಟಕ್ಕೆ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಸದರಿ ವಿಡಿಯೋದಲ್ಲಿ ಕಂಡು ಬಂದಿರುವುದಿಲ್ಲ. ಪರಿಶೀಲಿಸಲಾದ ವಿಡಿಯೋದಲ್ಲಿ ‘ಪೊಲೀಸರಿಗೆ ಧಿಕ್ಕಾರ’ ಎಂದು ಇರುತ್ತದೆ. ಸಾರ್ವಜನಿಕರಿಗೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವ ವಿಡಿಯೋ ಲಭ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ಕಛೇರಿ ಅಥವಾ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದರೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಬಾರದು ಎಂದು ಈ ಮೂಲಕ ತಿಳಿಸಲಾಗುತ್ತದೆ ಜಿಲ್ಲಾ ಪೊಲೀಸ್ ತಿಳಿಸಿದೆ.
ದಾವಣಗೆರೆ: ಚನ್ನಗಿರಿ ಗಲಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಡಿಯೋ ವೈರಲ್ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ pic.twitter.com/bDCftxd7P3
— DVG Suddi (@dvg_suddi) May 29, 2024