Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; ಗಾಂಜಾ ವಶ

IMG 20230926 WA0000

ದಾವಣಗೆರೆ

ದಾವಣಗೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; ಗಾಂಜಾ ವಶ

ದಾವಣಗೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 25 ಸಾವಿರ ರೂ.ಬೆಲೆಯ 1 ಕೆಜಿ 425 ಗ್ರಾಂ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದು ಈ ಬಗ್ಗೆ ಆರೋಪಿತರ ವಿರುದ್ದ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ, ಚನ್ನಗಿರಿ ನಗರದ ವಡ್ನಾಳ್ ರಾಜಣ್ಣ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಯಾರೋ ಆಸಾಮಿಗಳು ಗಾಂಜಾ ಮಾರಾಟ ಮಾಡುತ್ತಿರುತ್ತಾರೆಂಬ ಖಚಿತ ಮಾಹಿತಿ ಬಂದ ಮೇರೆಗೆ ಡಿವೈಎಸ್ಪಿ ಡಾ. ಸಂತೋಷ್ ಕೆ ಎಂ. ಮಾರ್ಗದರ್ಶನದಲ್ಲಿ ಹಾಗೂ ಚನ್ನಗಿರಿ ಪೊಲೀಸ್ ಠಾಣೆಯ ನಿರೀಕ್ಷಕರಾದ ನಿರಂಜನ ಬಿ ರವರ ನೇತೃತ್ವದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮೊಹಮ್ಮದ್ ಸೈಫುದ್ದೀನ್ ಹಾಗೂ ಸಿಬ್ಬಂದಿದಾಳಿ ನಡೆಸಿ ಆರೋಪಿತರಾದ 1) ಸಮೀವುಲ್ಲಾ, 22/ವರ್ಷ, ಗಾರೆ ಕೆಲಸ ವಾಸ: ಟಿಪ್ಪುನಗರ ಚನ್ನಗಿರಿ ನಗರ 2) ಮೊಹಮ್ಮದ್ ರಿಹಾನ್, 24 ವರ್ಷ, ಆಟೋ ಚಾಲಕ ಕೆರೆಬಿಳಚಿ ಗ್ರಾಮ 3) ರಂಗನಾಥ, 23 ವರ್ಷ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ವಾಸ: ಉಪ್ಪಾರಹಟ್ಟಿ ಚನ್ನಗಿರಿ ನಗರ. ಇವರನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಿಂದ ಸುಮಾರು 25 ಸಾವಿರ ರೂ. ಬೆಲೆಯ 1 ಕೆಜಿ 425 ಗ್ರಾಂ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದು ಈ ಬಗ್ಗೆ ಆರೋಪಿತರ ವಿರುದ್ದ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಎಸ್ಪಿ ಆರ್ ಬಿ ಬಸರಗಿ ರವರು ಪ್ರಶಂಸಿಸಿದ್ದಾರೆ.

 

ದಾವಣಗೆರೆ: ಹೊಸ ರಾಶಿ ಅಡಿಕೆ ದರ 46 ಸಾವಿರಕ್ಕೆ ಕುಸಿತ; ಹಳೆಯ ಅಡಿಕೆ ಬೆಲೆಯಲ್ಲಿಯೂ ಇಳಿಕೆ..!

 

ದಾವಣಗೆರೆ ಬಂದ್ ಯಶಸ್ವಿ; ನೀರು‌ ಹರಿಸದ ಸರ್ಕಾರದ ವಿರುದ್ಧ ರೈತರ ಕಿಡಿ; ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಗೆ ವರ್ತಕರ ಬೆಂಬಲ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top