ದಾವಣಗೆರೆ: ಅಡಿಕೆ ತೋಟದಲ್ಲಿ ಕೂಲಿ ಕೆಲಸವನ್ನು ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಹಾವು ಕಚ್ಚಿ ಮೃತ ಮಟ್ಟಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಂಕರ್(41) ಮೃತ ದುರ್ದೈವಿ. ಮುದ್ದೇನಹಳ್ಳಿ ಗ್ರಾಮದಲ್ಲಿ ತೋಟಕ್ಕೆ ಕಳೆನಾಶಕವನ್ನು ಸಿಂಪಡಿಸುವ ವೇಳೆ ಕಾಲಿಗೆ ಹಾವು ಕಚ್ಚಿದ್ದು ಸ್ಥಳದಲ್ಲಿಯೇ ಕುಸಿದು ಬಿದಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕರಿಯಾಗದೇ ಸಾವನ್ನಪಿದ್ದಾರೆ. ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.