ದಾವಣಗೆರೆ: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಏಕಾಏಕಿ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬೆಳಲಗೆರೆ ಗ್ರಾಮದಲ್ಲಿ ನಡೆದಿದೆ.
ಚನ್ನಗಿರಿ ತಾಲ್ಲೂಕಿನ ಬೆಳಲಗೆರೆ ಗ್ರಾಮದ ಬಸಪ್ಪ ಎಂಬುವರ ಮನೆಗೆ ಬೆಂಕಿ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೋಡ ನೋಡುತ್ತಿದ್ದಂತೆ ಪೂರ್ತಿ ಮನೆಗೆ ಬೆಂಕಿಗೆ ಆವರಿಸಿದೆ. ಬೆಂಕಿಗೆ ಮೇಲ್ಛಾವಣಿ ಕುಸಿದಿದೆ. ಮನೆಯಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರು ಕೂಡಲೇ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.



