Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆಗೆ ಆಕಸ್ಮಿಕ ಬೆಂಕಿ; ಸುಟ್ಟು ಭಸ್ಮವಾದ ಇಡೀ ಮನೆ-ಅಪಾರ ಪ್ರಮಾಣದ ನಷ್ಟ

IMG 20231213 075206

ಚನ್ನಗಿರಿ

ದಾವಣಗೆರೆ: ಮನೆಗೆ ಆಕಸ್ಮಿಕ ಬೆಂಕಿ; ಸುಟ್ಟು ಭಸ್ಮವಾದ ಇಡೀ ಮನೆ-ಅಪಾರ ಪ್ರಮಾಣದ ನಷ್ಟ

ದಾವಣಗೆರೆ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ, ಇಡೀ ಮನೆ ಸುಟ್ಟು ಭಸ್ಮವಾಗಿದೆ. ಬೆಂಕಿಗೆ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ನಷ್ಟ ಉಂಟಾಗಿರುವ ಘಟ‌ನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸವರಾಜು ಅವರ ಮನೆ ಸುಟ್ಟು ಭಸ್ಮವಾಗಿದೆ. ಮನೆಯವರು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ ಘಟನೆ ನಡೆದಿದೆ. ಬೆಂಕಿಗೆ ಮನೆಯಲ್ಲಿದ್ದ 50 ಗ್ರಾಂ ಬಂಗಾರ, 3 3 ಲಕ್ಷ ನಗದು, 2 ಚೀಲ ರಾಗಿ, ಅಕ್ಕಿ, ಬಟ್ಟೆ, ಮಂಚ ಸೇರಿ ಇತರೆ ವಸ್ತುಗಳು ಸುಟ್ಟು ಹೋಗಿವೆ. ಸುದ್ದಿ ತಿಳಿದ ತಕ್ಷಣ ಚನ್ನಗಿರಿಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top