Connect with us

Dvgsuddi Kannada | online news portal | Kannada news online

ಚನ್ನಗಿರಿ; ಕನ್ನಡ ಸಾಹಿತ್ಯ ಪರಿಷತ್ತಿನ 108ನೆಯ ಸಂಸ್ಥಾಪನ ದಿನಾಚರಣೆ

ಚನ್ನಗಿರಿ

ಚನ್ನಗಿರಿ; ಕನ್ನಡ ಸಾಹಿತ್ಯ ಪರಿಷತ್ತಿನ 108ನೆಯ ಸಂಸ್ಥಾಪನ ದಿನಾಚರಣೆ

ಚನ್ನಗಿರಿ: ಚನ್ನಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದಿಂದ ನಾಳೆ‌(ಮೇ.5) ಗುರುವಾರ ಬೆಳಗ್ಗೆ 11 ಗಂಟೆಗೆ ಚನ್ನಗಿರಿಯ ನಿವೃತ್ತ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 108 ನೆಯ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಚನ್ನಗಿರಿ ಕಸಾಪ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ತಿಳಿಸಿದ್ದಾರೆ.

ಕನ್ನಡಿಗರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಮೂಲಕ ಹರಿದು ಹಂಚಿಹೋಗಿದ್ದ ಕನ್ನಡಿಗರನ್ನು ಒಂದುಗೂಡಿಸಬೇಕೆನ್ನುವ ಆಕಾಂಕ್ಷೆಯಿಂದ 1915 ಮೇ 5 ರಂದು ಕರ್ನಾಟಕ ಸಾಹಿತ್ಯ ಪರಿಷತ್ತು ಉದಯವಾಯಿತು.ಕಳೆದ ಒಂದು ಶತಮಾನದಿಂದ ನಾಡು ನುಡಿ ಸಂಸ್ಕೃತಿಯ ರಕ್ಷಣೆ ಮತ್ತು ವಿಕಾಸಕ್ಕಾಗಿ ಕಂಕಣಬದ್ದವಾಗಿರುವ ಕನ್ನಡಿಗರ ನಾಡಗುಡಿಯಾದ ಕನ್ನಡ ಸಾಹಿತ್ಯ ಪರಿಷತ್ತು ನೂರರ ಗಡಿದಾಟಿ ತನ್ನ 108 ನೆ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪುರಸಭೆಯ ಅಧ್ಯಕ್ಷೆ ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ ನೆರವೇರಿಸಲಿದ್ದು,ಕನ್ನಡ ಮನಸ್ಸುಗಳ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಬೀರಿದ ಪ್ರಭಾವ ಎಂಬ ವಿಷಯವನ್ನು ಕುರಿತು ಸಾಹಿತಿ ಎಂ.ಆರ್.ಲೋಕೇಶ್ವರಯ್ಯ ಉಪನ್ಯಾಸವನ್ನು ಮಾಡಲಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಸವಾಪಟ್ಟಣದ ಎಲ್.ಜಿ.ಮಧುಕುಮಾರ್ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದು ,ಮುಖ್ಯ ಅತಿಥಿಗಳಾಗಿ ನಿಕಟಪೂರ್ವ ಕಸಾಪ ಅಧ್ಯಕ್ಷ ಎಂ.ಯು.ಚನ್ನಬಸಪ್ಪ ,ಪುರಸಭೆಯ ಸದಸ್ಯ ಪರಮೇಶ್ವರಪ್ಪ ಪಾರಿ ಆಗಮಿಸಲಿದ್ದಾರೆ.ಕನ್ನಡ ಪರಿಚಾರಕರಾದ ಜಿ.ಚಿನ್ನಸ್ವಾಮಿಯವರಿಗೆ ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top