ಚನ್ನಗಿರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚನ್ನಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಬಸವಾಪಟ್ಟಣದ ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಯುವ ಸೌರಭ ಕಾರ್ಯಕ್ರಮ ಆಯೋಜಿಸಿದೆ.
ಯುವ ಕಲಾವಿದರು ಡೊಳ್ಳು ಕುಣಿತ, ಪುರವಂತಿಕೆ, ಬಯಲಾಟ, ಸುಗಮ ಸಂಗೀತ, ಜಾನಪದ ಗೀತೆಗಳು, ಸಮೂಹ ನೃತ್ಯಗಳು, ಲಂಬಾಣಿ ನೃತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.
ಕಾರ್ಯಕ್ರಮದಲ್ಲಿ ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ.ಎನ್.ಲಿಂಗಣ್ಣ, ಹೊಸಕೆರೆ ಗ್ರಾ.ಪಂ ಅಧ್ಯಕ್ಷ ಸೈಯದ್ ರಫೀಕ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಲ್.ಜಿ.ಮಧುಕುಮಾರ್, ಹಿರಿಯ ರಂಗಕಲಾವಿದ,ರಾಜ್ಯೋತ್ಸವ ಪುರಸ್ಕೃತ ಎಸ್.ಎನ್.ರಂಗಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಎಂ.ಡಿ.ರಾಘವೇಂದ್ರ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಕಲಾಸಕ್ತರು,ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ.



