Connect with us

Dvgsuddi Kannada | online news portal | Kannada news online

ದಾವಣಗೆರೆ: ಚನ್ನಗಿರಿ ಉಪನೋಂದಣಿ ಕಚೇರಿ ವ್ಯಾಪ್ತಿಯ ಕೃಷಿ, ಕೃಷಿಯೇತರ ಆಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆ

ಚನ್ನಗಿರಿ

ದಾವಣಗೆರೆ: ಚನ್ನಗಿರಿ ಉಪನೋಂದಣಿ ಕಚೇರಿ ವ್ಯಾಪ್ತಿಯ ಕೃಷಿ, ಕೃಷಿಯೇತರ ಆಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆ

ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ಚನ್ನಗಿರಿ ಉಪನೋಂದಣಿ ಕಚೇರಿಯ ವ್ಯಾಪ್ತಿಯಲ್ಲಿ ಬರುವ ಚನ್ನಗಿರಿ ನಗರ, ಮತ್ತು ಗ್ರಾಮಾಂತರ ಪ್ರದೇಶದ ಕೃಷಿ ಜಮೀನು ಹಾಗೂ ಕೃಷಿಯೇತರ ಆಸ್ತಿಗಳ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಿಸುವ ಸಲುವಾಗಿ ಆಗಸ್ಟ್ 11 ರಂದು ತಹಶೀಲ್ದಾರ್ ಹಾಗೂ ತಾಲ್ಲೂಕು ಮೌಲ್ಯಮಾಪನ ಉಪಸಮಿತಿ, ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿ ಆವರಣದಲ್ಲಿ ಸರ್ವ ಸದಸ್ಯರ ಸಭೆ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಸರ್ಕಾರಿ ಅಂದಾಜು ಮಾರ್ಗ ಸೂಚಿ ಬೆಲೆಗಳನ್ನು 2023-24ನೇ ಸಾಲಿನಲ್ಲಿ ಪರಿಷ್ಕರಿಸುವ ಸಂಬಂಧ ಚರ್ಚಿಸಿ, ಸರ್ವ ಸದಸ್ಯರ ಅಭಿಪ್ರಾಯದಂತೆ ಚಾಲ್ತಿ ಇರುವ ಮಾರ್ಗ ಸೂಚಿಬೆಲೆ 2019-20ನೇ ಸಾಲಿನಲ್ಲಿ ಪರಿಷ್ಕøತಗೊಂಡಿದ್ದು ನಂತರದಲ್ಲಿ ಪರಿಷ್ಕರಣೆಗೊಂಡಿರುವುದಿಲ್ಲ. ಆದ್ದರಿಂದ ಚಾಲ್ತಿ ಇರುವ ದರಗಳ ಪರಿಷ್ಕರಣೆ ಮಾಡುವುದು ಸೂಕ್ತವೆಂದು ತೀರ್ಮಾನಿಸಿ ಆಗಸ್ಟ್ 12 ರಿಂದ 15 ದಿವಸಗಳೊಳಗಾಗಿ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ ಮತ್ತು ಸೂಚನೆಗಳನ್ನು ದಾಖಲಾತಿಗಳ ಆಧಾರಗಳ ಮೇಲೆ ಸಕಾರಣಗಳೊಂದಿಗೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ತಹಸೀಲ್ದಾರ್ ಹಾಗೂ ಉಪನೋಂದಣಾಧಿಕಾರಿಗಳಿಗೆ ಸಲ್ಲಿಸುವುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top