Connect with us

Dvgsuddi Kannada | online news portal | Kannada news online

ದಾವಣಗೆರೆ; ಗುಡುಗು-ಸಿಡಿಲಿಗೆ 35 ಕುರಿ, ಮೇಕೆ ಸಾವು

ಚನ್ನಗಿರಿ

ದಾವಣಗೆರೆ; ಗುಡುಗು-ಸಿಡಿಲಿಗೆ 35 ಕುರಿ, ಮೇಕೆ ಸಾವು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮಾಚನಾಯಕನಹಳ್ಳಿಯಲ್ಲಿ ಭಾರಿ ಮಿಂಚು, ಗುಡುಗು ಹಾಗೂ ಸಿಡಿಲಿಗೆ 35 ಕುರಿ, ಮೇಕೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮಾಚನಾಯಕನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಮೇಯುತ್ತಿದ್ದ ಕುರಿ ಮತ್ತು ಮೇಕೆಗೆ ಸಿಡಿಲು ಹೊಡದಿದೆ.‌ಇದರ ಪರಿಣಾಮ 35 ಕುರಿ ಮತ್ತು ಮೇಕೆಗಳು ಸಾವನ್ನಪ್ಪಿವೆ.‌ತಿಪ್ಪಗೊಂಡನಹಳ್ಳಿ ಗೊಲ್ಲರಹಟ್ಟಿ ಗ್ರಾಮ ಚಿತ್ತಪ್ಪ, ವೀರೇಶಪ್ಪ ಹಾಗೂ ಕಾಟಪ್ಪಅವರು ಮಾಚನಾಯಕನಹಳ್ಳಿ ಗ್ರಾಮದ ಬಳಿ ಕುರಿ ಮೇಯಿಸಲು ಬಂದಿದ್ದರು. ಈ ವೇಳೆ ಘಟನೆ ಸಂಭವಿಸಿದೆ. ಆದರೆ, ಕುರಿ ಕಾಯುವವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಸ್ಥಳಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕೃತಿ ವಿಕೋಪ ಪರಿಹಾರ ಯೋಜನೆ ಅಡಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಹೇಳಿದರು. ಈ ವೇಳೆ ತಹಶೀಲ್ದಾರ್ ಡಾ.ಪಟ್ಟರಾಜಗೌಡ, ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಅಶೋಕ್ ಕುಮಾರ್, ಪಿಎಸ್‌ಐ ಕೆ.ಎನ್. ಚಂದ್ರಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಟಿ. ನಾಗರಾಜ್ ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top