Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬಸವಾಪಟ್ಟಣ ಹೋಬಳಿಯ ದೊಡ್ಡಘಟ್ಟ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸಬೇಕು.ಹೊಸ ನ್ಯಾಯಬೆಲೆ ಅಂಗಡಿಗೆ 35-ಅಂತ್ಯೋದಯ, 330-ಬಿಪಿಎಲ್(ಅಕ್ಷಯ), ಎಪಿಎಲ್-4 ಸೇರಿದಂತೆ ಅಂದಾಜು ಒಟ್ಟು 369 ಪಡಿತರ ಚೀಟಿಗಳನ್ನು ನಿಯೋಜಿಸುವ ಉದ್ದೇಶ ಹೊಂದಲಾಗಿದೆ.

ಅರ್ಜಿಯನ್ನು ಜಂಟಿ ನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸತಕ್ಕದ್ದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿ ಅಥವಾ ತಹಶೀಲ್ದಾರ್ ಚನ್ನಗಿರಿ ತಾಲ್ಲೂಕು ಕಚೇರಿಯಿಂದ ಪಡೆಯಬಹುದು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top