ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಬಟ್ಟೆ ಅಂಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ಕೆನ್ನಾಲಿಗೆ 40 ಲಕ್ಷದಷ್ಟು ಬಟ್ಟೆ ಹಾಗೂ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿವೆ.
ಸಂತೆಬೆನ್ನೂರಿನ ಮುಖ್ಯ ರಸ್ತೆಯ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಬಟ್ಟೆ ಅಂಗಡಿಯ ಪಕ್ಕದಲ್ಲಿದ್ದ ವಿದ್ಯುತ್ ಕಂಬದಿಂದ ಕಿಡಿ ತಗುಲಿ ಬಟ್ಟೆ ಅಂಗಡಿಗೆ ಬೆಂಕಿ ಬಿದ್ದಿದೆ ಎನ್ನಲಾಗಿದೆ.
ಅಂಗಡಿಯಲ್ಲಿದ್ದ ಬಟ್ಟೆಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆ ಬಟ್ಟೆ ಅಂಗಡಿಯ ಪಕ್ಕದಲ್ಲಿದ್ದ ಹೋಟೆಲ್ ಗೂ ವ್ಯಾಪಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರತ ಸಂಭವಿಸಿದೆ.



