ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಕಳೆದ ಒಂದು ವಾದರಿಂದ ಮತ್ತೆ ಕುಸಿತ ಕಾಣುತ್ತ ಬರುತ್ತಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯ ಫೆ.15 ಮಾರುಕಟ್ಟೆ ಬೆಲೆ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 46, 039 ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ ದಿನದ ಮಾರುಕಟ್ಟೆಗೆ ಹೊಲಿಸಿದ್ರೆ ಬೆಲೆಯಲ್ಲಿ 340 ಕುಸಿತ ಕಂಡಿದೆ. ಇದರೊಂದಿಗೆ ಒಂದು ವಾರದಲ್ಲಿ 800 ರೂಪಾಯಿ ಇಳಿಕೆಯಾಗಿದೆ.
ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 46, 039 ಗರಿಷ್ಠ ಬೆಲೆ ದಾಖಲಾಗಿದೆ. ಕಳೆದ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಗೆ ಗರಿಷ್ಠ 46,379 ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 37,209 ಬೆಲೆಗೆ ಮಾರಾಟವಾಗಿದೆ.
ಫೆ.15 ರಂದು ಉತ್ತಮ ರಾಶಿಯ ಕನಿಷ್ಠ ಬೆಲೆ 42,129 ಆಗಿದ್ದು, ಗರಿಷ್ಠ ಬೆಲೆ 46,039 ಹಾಗೂ ಸರಾಸರಿ ಬೆಲೆ 44,968 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ 28,129 ಗರಿಷ್ಠ ಬೆಲೆ 37,209 ಹಾಗೂ ಸರಾಸರಿ ಬೆಲೆ 34, 098 ಆಗಿದೆ.



