ದಾವಣಗೆರೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ “ಚೇತನಾ” ಯೋಜನೆಯಡಿ ದಮನಿತ ಮಹಿಳೆಯರು ತಮ್ಮ ವೃತ್ತಿ ಜೀವನದಿಂದ ಹೊರಬಂದು ಸ್ವಾವಲಂಬಿಗಳಾಗಿ ಜೀವನ ನಡೆಸಲು ಮತ್ತು ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಲು ರೂ.30,000 ಪ್ರೋತ್ಸಾಹಧನ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಗೆ ಒಟ್ಟು ಭೌತಿಕ 21 ಗುರಿ ಇದ್ದು, ಅರ್ಹ ದಮನಿತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಶ್ರೀದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ(ರಿ), 2ನೇ ಮೇನ್, 7ನೇ ಕ್ರಾಸ್, ದೇವರಾಜ ಅರಸ್ ಬಡಾವಣೆ, ‘’ಬಿ‘’ ಬ್ಲಾಕ್ ದಾವಣಗೆರೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂ.30 ರ ಸಂಜೆ 5.30 ರೊಳಗಾಗಿ ಸಂಸ್ಥೆಯ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊಬೈಲ್ ಸಂಖ್ಯೆ 7676375433 ಅನ್ನು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ



