ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜಮೀನು ಒಂದರಲ್ಲಿ ನಿನ್ನೆ (ಮೇ 16) ಸಂಜೆ ಸಿಡಿಲು ಬಡಿದು 154 ಜಾನುವಾರುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲ್ಲೂಕಿನ ಅಡವಿಮಲ್ಲಾಪುರ ಗ್ರಾಮದ ಬೈಯಣ್ಣ, ಪಾಪಯ್ಯ ಸೇರಿದಂತೆ ನಾಲ್ವರಿಗೆ ಸೇರಿದ ಜಾನುವಾರುಗಳು ಮೃತಪಟ್ಟಿವೆ. 114 ಮೇಕೆಗಳು, 39 ಕುರಿಗಳು ಹಾಗೂ 1 ಎತ್ತು ಮೃತಪಟ್ಟಿವೆ. ಸಂಜೆ ಬೀಸಿದ ಬಿರುಗಾಳಿಗೆ ಕುರಿ, ಮೇಕೆ ಸಾವುಗಳಿಂದ ಕುರಿಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಮತ್ತೊಂದೆಡೆ ಇದೇ ಗ್ರಾಮದ ಎತ್ತು ಸಿಡಿಲಿಗೆ ಪ್ರಾಣಬಿಟ್ಟಿದೆ. ಇದನ್ನು ಕಂಡು ಕುಟುಂಬದ ವೃದ್ಧೆಯೊಬ್ಬರು ಕಣ್ಣೀರಿಟ್ಟಿದ್ದಾರೆ.



