ದಾವಣಗೆರೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಏ.29) ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದಾರೆ.
ನಾಳೆ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೊರಟು, ಬೆಳಿಗ್ಗೆ 11.25ಕ್ಕೆ ಜಗಳೂರು ತಾಲ್ಲೂಕು ಕ್ರೀಡಾಂಣಕ್ಕೆ ಆಗಮಿಸುವರು. ನಂತರ ಬಯಲು ರಂಗಮಂದಿರ ನಡೆಯುವ ಜಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.15ಕ್ಕೆ ಜಗಳೂರು ಕ್ರೀಡಾಂಗಣದಿಂದ ಹೆಲಿಪ್ಯಾಡ್ ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



