ದಾವಣಗೆರೆ: ಬೈರತಿ ಬಸವರಾಜ್ ವಿರುದ್ದ ಭ್ರಷ್ಟಾಚಾರ ಆರೋಪದ ಆಡಿಯೋ ವಿಚಾರ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಈಗಾಗಲೇ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಆರೋಪಿ ಹೇಳಿಕೆ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಯುತ್ತಿದೆ. ಯಾರು ತಪ್ಪಿತಸ್ಥರು ಎಂಬುದು ತನಿಖೆಯಿಂದ ಹೊರ ಬರುತ್ತೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಏಳನೇ ಆಯೋಗ ಜಾರಿ ವಿಚಾರದಲ್ಲಿ ಸರ್ಕಾರದ ನಿವೃತ್ತಿ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಾಕಷ್ಟು ದಿನಗಳಿಂದ ಸರ್ಕಾರ ನೌಕರರ ಒತ್ತಾಯವು ಕೂಡ ಆಗಿತ್ತು ಎಂದು ಹೇಳಿದ್ದಾರೆ.



