ದಾವಣಗೆರೆ: ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ತಪ್ಪುಗಳಾಗಿದ್ದರೆ ಸರಿಪಡಿಸಲು ಸಲಹೆಗಳಿಗೆ ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತಮಾಡಿ ಅವರು, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಸಲಹೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯ ವೆಬ್‍ಸೈಟ್‍ನಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತಂತೆ ಪ್ರಸ್ತುತ ಹಾಗೂ ಹಿಂದಿನ ವಿವರವನ್ನು ಮುಕ್ತವಾಗಿ ಪ್ರಕಟಿಸಲಾಗಿದೆ. ಪರಿಷ್ಕರಣೆ ಸಂದರ್ಭದಲ್ಲಿ ತಪ್ಪುಗಳಾಗಿದ್ದರೆ ಸರಿಪಡಿಸಲಾಗುವುದು. ಈ ಹಿಂದಿನ ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿಯೂ ಹಲವಾರು ತಪ್ಪುಗಳಾಗಿವೆ, ಅವುಗಳನ್ನೂ ಸೇರಿ ಸರಿಪಡಿಸಬೇಕಾಗಿರುವ ಎಲ್ಲಾ ಅಂಶಗಳನ್ನೂ ಸರಿಪಡಿಸಲಾಗುವುದೆಂದರು.
ವಿದ್ಯಾರ್ಥಿಗಳ ಪ್ರವಾಸಕ್ಕೆ ಹಿಂದಿ ಭಾಷೆ ಕಡ್ಡಾಯ ಎಂಬ ಯಾವುದೇ ಸುತ್ತೋಲೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಂದ ಬಂದಿರುವುದಿಲ್ಲ. ಈ ರೀತಿ ಸುತ್ತೋಲೆ ಹೊರಡಿಸಿದ ಅಧಿಕಾರಿ ವಿರುದ್ದ ಕ್ರÀಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.



