ದಾವಣಗೆರೆ: ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಏ.04 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಏ.04 ರ ಬೆಳಿಗ್ಗೆ 8.30 ಕ್ಕೆ ಬೆಂಗಳೂರಿನಿಂದ ರಸ್ತೆಯ ಮೂಲಕ ಹೊರಟು ಹರಿಹರ ತಾಲ್ಲೂಕಿನ ಬೆಳ್ಳೂಡಿಗೆ ಆಗಮಿಸುವರು.
ನಂತರ 11.30ಕ್ಕೆ ಶಾಖಾಮಠದ ಆವರಣದಲ್ಲಿ ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಟ್ರಸ್ಟ್ ಆಯೋಜಿಸಿರುವ ವಿದ್ಯಾರ್ಥಿನಿಲಯ, ಸಮುದಾಯ ಭವನ ಮತ್ತು ಮುಖ್ಯ ಮಹಾದ್ವಾರದ ಉದ್ಘಾಟನೆ ಹಾಗೂ ಶಾಖಾಮಠದ 5ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಹಾಗೂ 1.30ಕ್ಕೆ ಬೆಳ್ಳೂಡಿಯಿಂದ ರಸ್ತೆಯ ಮೂಲಕ ಬೆಂಗಳೂರಿಗೆ ತಲುಪುವರೆಂದು ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಏ.4 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.4 ರಂದು ಬೆಳಿಗ್ಗೆ 8 ಗಂಟೆಗೆ ಬೆಂಳೂರಿನಿಂದ ಹೊರಟು 11.30 ಕ್ಕೆ ಹರಿಹರ ತಾಲ್ಲೂಕು ಬೆಳ್ಳೂಡಿ ಗ್ರಾಮದ ಶಾಖಾಮಠದ ಆವರಣದಲ್ಲಿ ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಟ್ರಸ್ಟ್ ತಲುಪಲಿದ್ದಾರೆ. ನಂತರ ಮಧ್ಯಾಹ್ನ 1.30ಕ್ಕೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



