ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ (ಫೆ.09) ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.9 ರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಿ ಬೆಳಿಗ್ಗೆ 11.25 ಕ್ಕೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಹೆಲಿಪ್ಯಾಡ್‍ಗೆ ಆಗಮಿಸಿ, ಮಹರ್ಷಿ ವಾಲ್ಮೀಕಿ ಗುರುಪೀಠದ ವತಿಯಿಂದ ಮಹರ್ಷಿ ವಾಲ್ಮೀಕಿ ಜಾತ್ರೆ-2021 ರ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ ಬೃಹತ್ ಜನಜಾಗೃತಿ ಸಮಾವೇಶದ ಉದ್ಘಾಟನೆ ಹಾಗೂ ಬುಡಕಟ್ಟು ಸಂಶೋಧನಾ ಕೇಂದ್ರ ಮತ್ತು ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 2.25 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣ ತಲುಪುವರು ಎಂದು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



