ದಾವಣಗೆರೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಜೂನ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in. ವೀಕ್ಷಿಸಬಹುದು. ದೂ.ಸಂ: 8050370006 ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯಿತ್ರಿ ತಿಳಿಸಿದ್ದಾರೆ.