ದಾವಣಗೆರೆ: ಬೆಳಗಾವಿಯಿಂದ ಆರಂಭವಾಗಿರುವ ಕಾಂಗ್ರೆಸ್‌ನ ಪ್ರಜಾಧ್ವನಿ ಬಸ್ ಯಾತ್ರೆಯು ಜ. 19ರಂದು ಸಂಜೆ 4 ಗಂಟೆಗೆ ನಗರಕ್ಕೆ ಆಗಮಿಸಲಿದ್ದು ಸಮಾವೇಶ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿ ರಾಜ್ಯದ ಕಾಂಗ್ರೆಸ್ ಪ್ರಮುಖ ನಾಯಜರು ಭಾಗಿಯಾಗಲಿದ್ದರೆ ಎಂದು ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಬೆಳಗಾವಿ, ಚಿಕ್ಕೋಡಿಯಲ್ಲಿ ಯಾತ್ರೆ ಈಗಾಗಲೇ ಯಶಸ್ಸು ಕಂಡಿದ್ದು, ದಾವಣಗೆರೆಯಲ್ಲೂ ಬೃಹತ್ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು. ಯಾತ್ರೆಯು ಜ. 17ರಂದು ಹೊಸಪೇಟೆ ಮತ್ತು ಕೊಪ್ಪಳ, 18ರಂದು ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ತೆರಳಿ, 19ರಂದು ಬೆಳಗ್ಗೆ ಹಾವೇರಿಗೆ ಆಗಮಿಸಲಿದೆ. ಸಂಜೆ 4ಕ್ಕೆ ದಾವಣಗೆರೆ ಬಸ್ ಬರಲಿದೆ ಎಂದರು.
ದಾವಣಗೆರೆಯಲ್ಲಿ ಎಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಬಗ್ಗೆ ಒಂದೆರಡು ದಿನಗಳಲ್ಲಿ ಮಾಹಿತಿ ನೀಡಲಾಗುವುದು. ಜಿಲ್ಲೆಯಲ್ಲಿ ಪಕ್ಷದ 42 ಆಕಾಂಕ್ಷಿಗಳಿದ್ದು, ನಗರದಿಂದ 25 ಸಾವಿರಕ್ಕೂ ಹೆಚ್ಚು ಮಂದಿ ಬರಬೇಕು ಎಂದು ಸೂಚಿಸಲಾಗಿದೆ.



