Connect with us

Dvgsuddi Kannada | online news portal | Kannada news online

ದಾವಣಗೆರೆ: ಶಾಸಕರು, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಲೋಕಸಭಾ ಅಭ್ಯರ್ಥಿಗ‌ಳ ಪಟ್ಟಿ ಅಂತಿಮ; ಸಿಎಂ ಸಿದ್ದರಾಮಯ್ಯ

IMG 20240203 174702

ಪ್ರಮುಖ ಸುದ್ದಿ

ದಾವಣಗೆರೆ: ಶಾಸಕರು, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಲೋಕಸಭಾ ಅಭ್ಯರ್ಥಿಗ‌ಳ ಪಟ್ಟಿ ಅಂತಿಮ; ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಎಲ್ಲಾ ಮುಖಂಡರು, ಶಾಸಕರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಶೀಘ್ರವೇ ಅಭ್ಯರ್ಥಿಗಳ‌ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ಕೇಳಬೇಡಿ ಎಂದು ಹೇಳದಕ್ಕೆ ಆಗಲ್ಲ. ಅಭ್ಯರ್ಥಿ‌ ಬಗ್ಗೆ ಆಯಾ ಲೋಕಸಭಾ ಕ್ಷೇತ್ರದ ಮುಖಂಡರು, ಶಾಸಕರು, ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಘೋಷಿಸಲಾಗುವುದು ಎಂದು ತಿಳಿಸಿದರು

ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್ ಮಾಡಲು ಅಧಿಕಾರಿಗಳು ಸತಾಯಿಸುವ ಬಗ್ಗೆ ಗುತ್ತಿಗೆದಾರು ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮಕೈಗೊಳ್ಳಲಾಗುವುದು.‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನಿಗೆ ಟಿಕೆಟ್ ವಿಚಾರ, ಆಕಾಂಕ್ಷಿಯಾಗಿ ಕೇಳಲಿ ಬಿಡಿ ಎಂದರು.

ಎಲ್.ಕೆ. ಅಡ್ವಾಣಿಯವರಿಗೆ ಭಾರತ ರತ್ನ ಕೊಡಲಿ. ಆದರೆ, ತುಮಕೂರು ಸಿದ್ಧಗಂಗಾ ಶ್ರೀಗಳಿಗೆ ಅವರಿಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೆ. ನೀಡಿಲ್ಲ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top