Connect with us

Dvgsuddi Kannada | online news portal | Kannada news online

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ದಾವಣಗೆರೆ ಜಿಲ್ಲಾ ಉಸ್ತುವಾರಿಯಾಗಿ ನೇಮಕ

ದಾವಣಗೆರೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ದಾವಣಗೆರೆ ಜಿಲ್ಲಾ ಉಸ್ತುವಾರಿಯಾಗಿ ನೇಮಕ

ದಾವಣಗೆರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಅವರನ್ನು  ದಾವಣಗೆರೆ ಜಿಲ್ಲೆ ಉಸ್ತುವಾರಿಯನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಹರ್ಷ ವ್ಯಕ್ತಿಪಡಿಸಿಸದ್ದು, ಸಲೀಂ ಅಹಮದ್‌ ಅವರನ್ನು ಅಭಿನಂದಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಅನುಭವಿ ರಾಜಕಾರಣಿ ಸಲೀಂ ಅಹಮದ್‌ ನೇಮಕದಿಂದ ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ನ ಸಂಘಟನೆಗೆ ಆನೆಬಲ ಬಂದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ದಾವಣಗೆರೆ ಉಸ್ತುವಾರಿ ಮಾತ್ರವಲ್ಲದೆ,  ತುಮಕೂರು, ಚಿತ್ರದುರ್ಗ, ಹಾವೇರಿ, ಗದಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕಾಂಗ್ರೆಸ್ ಉಸ್ತುವಾರಿ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಆಡಳಿತದ ಜವಾಬ್ದಾರಿಯ ಜೊತೆಗೆ ಕಾಂಗ್ರೆಸ್ ಸೇವಾದಳದ ಉಸ್ತುವಾರಿ ಸಲೀಂ ಅಹಮದ್‌  ಅವರಿಗೆ ನೀಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top