ಡಿವಿಜಿ ಸುದ್ದಿ, ದಾವಣಗೆರೆ: ಮೆಕ್ಕೆಜೋಳ ಮತ್ತು ಭತ್ತಕ್ಕೆ ಬೆಂಬಲ ಬೆಲೆ ನಿಗದಿ ಮಾಡಿ, ಕೂಡಲೇ ಖರೀದಿ ಕೇಂದ್ರ ತೆರೆಯಬೇಕು ಎಂದು ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರ ಆರಂಭಿಸಿದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಯದೇವ ವೃತ್ತದಿಂದ ಎಸಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಉಪ ವಿಭಾಗಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಸ್.ಬಸವಂತಪ್ಪ, ಈ ವರ್ಷ ಉತ್ತಮವಾಗಿ ಮಳೆಯಾಗಿದ್ದು, ಮೆಕ್ಕೆಜೋಳ ಮತ್ತು ಭತ್ತದ ಇಳುವರಿ ಉತ್ತಮವಾಗಿದೆ. ಆದರೆ, ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತದ ದರ ಕುಸಿದಿರುವ ಕಾರಣಕ್ಕೆ ರೈತರು ಸಂಕಷ್ಟ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.



