ದಾವಣಗೆರೆ: ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣಾ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಸಚಿವ ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡರ ಹೆಸರು ಸೇರಿಸಲಾಗಿದೆ ಎಂದು ಆಯುಕ್ತರ ಕಚೇರಿ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ವಿಪಕ್ಷ ನಾಯಕ ಎ. ನಾಗರಾಜ್ , ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಸದಸ್ಯರಾದ ಶ್ರೀನಿವಾಸ್, ಜಿ.ಎಸ್. ಮಂಜುನಾಥ್, ಕೆ. ಚಮನ್ ಸಾಬ್, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಕಳೆದ ಫೆ.19 ರಂದು ನಡೆದ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ವಾಸವಿರದ ವಿಧಾನ ಪರಿಷತ್ ಸದಸ್ಯರ ಬಲದಿಂದ ಬಿಜೆಪಿ ಅಧಿಕಾರಕ್ಕೇತ್ತು. ಇದೀಗ ಈ ಬಾರಿಯೂ ಸಚಿವ ಶಂಕರ್, ಪರಿಷತ್ ಸದಸ್ಯ ಚಿದಾನಂದ ಗೌಡರ ಹೆಸರು ಸೇರಿಸಿದೆ. ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರಿಸುವುದನ್ನು ಖಂಡಿಸಿದ ಕಾಂಗ್ರೆಸ್ ಪಕ್ಷದ ಸದಸ್ಯರು, ತೀವ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದರು.



