ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ವೆಂಟಿಲೇಟರ್ ಸೌಲಭ್ಯ ಸಿಗದೆ ರೋಗಿಗಳು ಪರದಾಟ ನಡೆಸುತ್ತಿದ್ದಾರೆ. ಸರ್ಕಾರ ರೋಗಿಗಳಿಗೆ ಅಗತ್ಯವಾದ ವೆಂಟಿಲೇಟರ್ ಒದಗಿಸಿ, ಇಲ್ಲವೇ ರೋಗಿಗಳಿಗೆ 10 ಲಕ್ಷ ಪರಿಹಾರ ನೀಡಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾರೊನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಸರ್ಕಾರ ವೆಂಟಿಲೇಟರ್ ಒದಗಿಸಿ ರೋಗಿಗಳ ಜೀವ ಕಾಪಾಡಬೇಕಿರುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ, ಸರ್ಕಾರ ಸೂಕ್ತ ವ್ಯವಸ್ಥೆ ಒದಗಿಸದೆ ಸಾರ್ವಜನಿಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಪಾಲಿಕೆ ವಿಪಕ್ಷ ನಾಯಕ ಎ . ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನಿ ಶಿವಕುಮಾರ್, ಮಂಜುನಾಥ್, ಚಮನ್ ಸಾಬ್, ಕೆಪಿಸಿಸಿ ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ ಕೆ.ಎಲ್ ಹರೀಶ್ , ಸೈಯದ್ ಖಾಲಿದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಯಿ ಮಾಲ್ತೇಶ್, ಅಯೂಬ್ ಪೈಲ್ವಾನ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.



