Connect with us

Dvgsuddi Kannada | online news portal | Kannada news online

ಚನ್ನಗಿರಿ, ದಾವಣಗೆರೆಯಲ್ಲಿ ಮಾಡಾಳ್ ಮಿಸ್ಸಿಂಗ್ ಪೋಸ್ಟರ್ ಅಭಿಯಾನ

ದಾವಣಗೆರೆ

ಚನ್ನಗಿರಿ, ದಾವಣಗೆರೆಯಲ್ಲಿ ಮಾಡಾಳ್ ಮಿಸ್ಸಿಂಗ್ ಪೋಸ್ಟರ್ ಅಭಿಯಾನ

ದಾವಣಗೆರೆ: ಚನ್ನಗಿರಿ ಶಾಸಕನ‌ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಾಗಿನಿಂದ ಶಾಸಕರು ಕ್ಷೇತ್ರದಿಂದ ನಾಪತ್ತೆಯಾದ ಹಿನ್ನೆಲೆ ದಾವಣಗೆರೆ, ಚನ್ನಗಿರಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಮಾಡಾಳ್ ಮಿಸ್ಸಿಂಗ್ ಪೋಸ್ಟರ್​​​ ಅಭಿಯಾನ‌ ನಡೆಸುತ್ತಿದ್ದಾರೆ.

ಲೋಕಾಯುಕ್ತ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ, ಪ್ರಕರಣ ನಡೆದು 6‌ ದಿನವಾದರೂ ಪತ್ತೆ ಆಗಿಲ್ಲ. ಅವರನ್ನು ಹುಡುಕಿಕೊಡಿ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ನೇತೃತ್ವದಲ್ಲಿ ಪೋಸ್ಟರ್ ಅಂಟಿಸುವ ಅಭಿಯಾನ ನಡೆಸಲಾಗುತ್ತಿದೆ. ನಗರದ ಪ್ರಮುಖ ಬೀದಿಗಳಲ್ಲಿ ಮಿಸ್ಸಿಂಗ್ ಪೋಸ್ಟರ್ ಅಂಟಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಕಾಣೆಯಾದವರ ಪಟ್ಟಿ ಮಾದರಿಯಲ್ಲಿ ಪೋಸ್ಟರ್ ಅಂಟಿಸಿದ ಕಾಂಗ್ರೆಸ್, ಕೊನೆ ಬಾರಿ ಕಾಣಿಸಿಕೊಂಡಿದ್ದು ಸಿಎಂ ಕಚೇರಿಯಲ್ಲಿ. ಪತ್ತೆಯಾದರೆ ಪೊಲೀಸ್​ ಹೆಲ್ಪ್​ಲೈನ್​ಗೆ ಕರೆ ಮಾಡುವಂತೆ ಮನವಿ ಪೋಸ್ಟರ್​ನಲ್ಲಿ ಬರೆಯಲಾಗಿದೆ.

ಶಾಸಕನ ಪುತ್ರ ಪ್ರಶಾಂತ್ ಮಾಡಾಳ್ ಪ್ರಶಾಂತ್ ಈಗಾಗಲೇ ಜೈಲಿನಲ್ಲಿದ್ದಾರೆ. ಆದ್ರೆ ಎ1 ಆರೋಪಿ ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ವಿರೂಪಾಕ್ಷಪ್ಪ ಮಾತ್ರ ಇನ್ನೂ ಭೂಗತರಾಗಿದ್ದಾರೆ. ಮಾಡಾಳ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು ಎಲ್ಲಿದ್ದಾರೆ ಎನ್ನುವ ಸುಳಿವೇ ಸಿಗುತ್ತಿಲ್ಲ. ಶಾಸಕ ನಾಪತ್ತೆಯಾಗಿ 6 ದಿನ ಕಳೆದರೂ ಪೊಲೀಸರ ಕೈಗೆ ಸಿಗುತ್ತಿಲ್ಲ.

ಲೋಕಾಯುಕ್ತ ದಾಳಿ ವೇಳೆ ಶಾಸಕರ ಪುತ್ರ ಕಚೇರಿಯಲ್ಲಿ 40ಲಕ್ಷ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದರು. ನಂತರ ಮನೆಯಲ್ಲಿ 8 ಕೋಟಿ ರೂ.ಅಧಿಕ ಹಣ ಪತ್ತೆಯಾಗಿತ್ತು. ಈ ಪ್ರಕರಣದ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದು, ಶಾಸಕರ ಪತ್ತೆಗೆ ಲೋಕಾಯುಕ್ತ ಮೂರು ವಿಶೇಷ ತಂಡಗಳನ್ನು ರಚಿಸಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top