ದಾವಣಗೆರೆ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 3 ಕ್ಷೇತ್ರಗಳಿಗೆ ಮಾತ್ರ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಲಾಗಿದೆ. ಉಳಿದ 4 ಕ್ಷೇತ್ರಗಳ ಘೋಷಣೆ ಬಾಕಿ ಉಳಿಸಿಕೊಳ್ಳಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೇಂದ್ರ ಚುನಾವಣಾ ಸಮಿತಿ ಉಸ್ತುವಾರಿ ಮುಕುಲ್ ವಾಸ್ನಿಕ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 92 ವರ್ಷದ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪಗೆ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಅವರ ಪುತ್ರ ಎಸ್. ಎಸ್. ಮಲ್ಲಿಕಾರ್ಜುನ ಸಹ ದಾವಣಗೆರೆ ದಕ್ಷಿಣದಲ್ಲಿ ಟಿಕೆಟ್ ನೀಡಲಾಗುದೆ. ಇನ್ನೂ ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ ಕೆ.ಎಸ್.ಬಸವರಾಜ್ ಗೆ ಟಿಕಿಟ್ ಸಿಕ್ಕಿದೆ. ಇನ್ನು ಜಿಲ್ಲೆಯ ಹಾಲಿ ಶಾಸಕ ರಾಮಪ್ಪ ಅವರ ಹರಿಹರ, ಹೊನ್ನಾಳಿ, ಜಗಳೂರು ಹಾಗೂ ಚನ್ನಗಿರಿ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಉಳಿಸಿಕೊಂಡಿದೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಶಾಮನೂರು ಶಿವಶಂಕರಪ್ಪಗೆ ಟಿಕೆಟ್ ನಿರಾಕರಣೆ ಮಾಡುವುದು ಅಷ್ಟು ಸುಲಭದ ಮಾತಲ್ಲ ಎಂಬುದು ಕಾಂಗ್ರೆಸ್ ನಾಯಕರು ಅರಿತಂತೆ ಕಾಣುತ್ತಿದೆ. ಈ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಒತ್ತಡ ಇದ್ದರೂ ಶಾಮನೂರು ಶಿವಶಂಕರಪ್ಪ ನೀಡಲಾಗಿದೆ.
ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡುವುದರಿಂದ ದಾವಣಗೆರೆ ಮಾತ್ರವಲ್ಲ ರಾಜ್ಯದ ಇತರ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಹ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ಕೈ ಹೈಕಮಾಂಡ್ ಲೆಕ್ಕಾಚಾರವಾಗಿದೆ. ಇನ್ನು ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಪುತ್ರ, ಕ್ಷೇತ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಟಿಕೆಟ್ ಪಡೆದಿದ್ದಾರೆ. ಕಳೆದ ಬಾರಿ ಸೋಲು ಕಂಡಿದ್ದರೂ ಈ ಬಾರಿ ಟಿಕೆಟ್ ಸಿಕ್ಕಿದೆ.