Connect with us

Dvg Suddi-Kannada News

ದಾವಣಗೆರೆ: ಕ್ರಿಕೆಟ್ ಆಡಿ ಪೆಟ್ರೋಲ್ ದರ ಏರಿಕೆ ಖಂಡಿಸಿದ ಕಾಂಗ್ರೆಸ್ ನಾಯಕರು

ದಾವಣಗೆರೆ

ದಾವಣಗೆರೆ: ಕ್ರಿಕೆಟ್ ಆಡಿ ಪೆಟ್ರೋಲ್ ದರ ಏರಿಕೆ ಖಂಡಿಸಿದ ಕಾಂಗ್ರೆಸ್ ನಾಯಕರು

ದಾವಣಗೆರೆ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಿಂದ  ಬಂಕ್‍ ಮುಂದೆ ಕ್ರಿಕೆಟ್ ಆಟವಾಡಿ ನಾಟೌಟ್-100 ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ,ಮಂಜಪ್ಪ ಮಾತನಾಡಿ,  ಜನಸಾಮಾನ್ಯರು, ಬಡವರ ಪರ ಇರುವ ಸರ್ಕಾರ ಅಲ್ಲ, ಬಡವರ ರಕ್ತ ಹೀರುವ ಸರ್ಕಾರ.  ಜನ ಕೊರೋನಾ ಸಂಕಷ್ಟದಿಂದ ಜನರು  ಸಾಯುತ್ತಿದ್ದಾರೆ, ಇಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್ ದರ ಈ ರೀತಿ ದಿನದಿಂದ ದಿನಕ್ಕೆ ಹೆಚ್ಚಿಸಿದರೆ ಬಡವರು ಬದುಕುವುದು ಹೇಗೆ ಎಂದರು.

ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚಳವಾದ ಕೂಡಲೇ ಸಾಗಣೆ-ಸಾಗಾಟ ದರ ಹೆಚ್ಚಳವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗುತ್ತದೆ, ದೇಶ ಹಾಳು ಮಾಡಬೇಡಿ. ಜನರಿಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಹೇಳಿ ನರೇಂದ್ರ ಮೋದಿ ಅಧಿಕಾರ ಮಾಡುತ್ತಿದ್ದಾರೆ. ಮೋದಿ ಈ ದೇಶದ ಜನರ ರಕ್ತ ಹೀರುತ್ತಿದ್ದಾರೆ. ಬೆಲೆ ಏರಿಕೆ ಮಾಡಿ ಜನರ ರಕ್ತ ಕುಡಿಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ, ಜನರಿಗೆ ಸುಳ್ಳು ಭರವಸೆ ನೀಡಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರು. ಅಚ್ಛೇ ದಿನ್ ಆಯೇಂಗೆ ಎಂದು ಹೇಳಿದ್ದರು. ಇವತ್ತು ನರಕದ ದಿನಗಳ ಬಂದಿವೆ ಎಂದರು.

ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ , ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಸ್.ಬಸವಂತಪ್ಪ, , ಸದಸ್ಯ ಜಿ.ಎಸ್.ಮಂಜುನಾಥ್, ಕೆ.ಚಮನ್ ಸಾಬ್ , ಸತೀಶ್, ಆನಂದ ಕರೇಗೌಡ್ರು, ಪ್ರಮೋದ್, ಪ್ರಜ್ವಲ್, ಮನು, ನಿಖಿಲ್, ನವೀನ್, ನೀಲಕಂಠಪ್ಪ, ಮಂಜು ಮತ್ತಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top