Connect with us

Dvg Suddi-Kannada News

ದಾವಣಗೆರೆ: ನಾಳೆ ಲಾಕ್‍ಡೌನ್ ಸಡಿಲಿಕೆ; ಬೆಳಗ್ಗೆ 6ರಿಂದ 12 ಗಂಟೆ ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ದಾವಣಗೆರೆ

ದಾವಣಗೆರೆ: ನಾಳೆ ಲಾಕ್‍ಡೌನ್ ಸಡಿಲಿಕೆ; ಬೆಳಗ್ಗೆ 6ರಿಂದ 12 ಗಂಟೆ ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ದಾವಣಗೆರೆ: ಜಿಲ್ಲೆಯಾದ್ಯಂತ ಜೂನ್ 14 ರವರೆಗೆ ಕಠಿಣ ಲಾಕ್ ಡೌನ್ ಮುಂದುವರಿಯಲಿದೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ನಾಳೆ (ಜೂ.07) ಅವಕಾಶ ಕಲ್ಪಿಸಲಾಗಿದೆ.

ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು, ತರಕಾರಿ, ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳಿಗೆ ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹೊಸ ನಿರ್ಬಂಧಗಳನ್ವಯ ಜೂ .07 ,09, ಮತ್ತು 11 ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಮದ್ಯದ ಅಂಗಡಿಗಳಿಗೆ ಮಾತ್ರ ಅವಕಾಶ ಇದ್ದು ಉಳಿದ ದಿನಗಳು ಹಾಲು ಮತ್ತು ಔಷಧಿಗಳನ್ನು ಹೊರತುಪಡಿಸಿ ಸಂಪೂರ್ಣವಾಗಿ ಬಂದ್ ಇರುತ್ತದೆ. ಜೂ.14 ರವರೆಗೆ ಯಾವುದೇ ಮದುವೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top