ದಾವಣಗೆರೆ: ಕೊರೊನಾ 3ನೇ ಅಲೆ ಹರಡದಂತೆ ತಡೆಯಲು ಮಾಸ್ಕ್ ಧರಿಸುವುದು ಅತ್ಯಾವಶ್ಯಕವಾಗಿದೆ. ಯಾವುದೇ ವ್ಯಕ್ತಿಯು ಮಾಸ್ಕ್ ಧರಿಸದಿರುವುದು ಕಂಡುಬಂದಲ್ಲಿ ಮಹಾನಗರಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳು/ಪ್ರಾಧಿಕಾರಗಳು, ನಗರಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರೆ ಪ್ರದೇಶಗಳಲ್ಲಿ ರೂ.100 ದಂಡವನ್ನು ವಿಧಿಸಬೇಕು. ಸ್ಥಳೀಯವಾಗಿ ಪ್ರಕರಣಗಳು ಹರಡುವುದನ್ನು ತಡೆಗಟ್ಟಲು ಹೆಚ್ಚಿನ ಪ್ರಕರಣಗಳು ಕಂಡುಬರುವ ವಲಯ/ಪ್ರದೇಶಗಳಲ್ಲಿ ಕಠಿಣವಾದ ಸೂಕ್ಷ್ಮ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ಭಾರತ ದಂಡ ಸಂಹಿತೆಯ 188 ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದದ ಇತರ ಕಾನೂನು ಉಪಬಂಧಗಳಡಿಯಲ್ಲಿನ ಕಾನೂನು ಕ್ರಮದ ಜೊತೆಗೆ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51 ರಿಂದ 60ರನ್ವಯ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದೆಂದು ತಿಳಿಸಿದ್ದಾರೆ.



