Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾಸ್ಕ್ ಧರಿಸದಿದ್ರೆ 250 ರೂಪಾಯಿ ದಂಡ; ಡಿಸಿ ಆದೇಶ

davangere dc sp

ದಾವಣಗೆರೆ

ದಾವಣಗೆರೆ: ಮಾಸ್ಕ್ ಧರಿಸದಿದ್ರೆ 250 ರೂಪಾಯಿ ದಂಡ; ಡಿಸಿ ಆದೇಶ

ದಾವಣಗೆರೆ: ಕೊರೊನಾ 3ನೇ ಅಲೆ ಹರಡದಂತೆ ತಡೆಯಲು ಮಾಸ್ಕ್ ಧರಿಸುವುದು ಅತ್ಯಾವಶ್ಯಕವಾಗಿದೆ.  ಯಾವುದೇ ವ್ಯಕ್ತಿಯು ಮಾಸ್ಕ್ ಧರಿಸದಿರುವುದು ಕಂಡುಬಂದಲ್ಲಿ ಮಹಾನಗರಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳು/ಪ್ರಾಧಿಕಾರಗಳು, ನಗರಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರೆ ಪ್ರದೇಶಗಳಲ್ಲಿ ರೂ.100 ದಂಡವನ್ನು ವಿಧಿಸಬೇಕು. ಸ್ಥಳೀಯವಾಗಿ ಪ್ರಕರಣಗಳು ಹರಡುವುದನ್ನು ತಡೆಗಟ್ಟಲು ಹೆಚ್ಚಿನ ಪ್ರಕರಣಗಳು ಕಂಡುಬರುವ ವಲಯ/ಪ್ರದೇಶಗಳಲ್ಲಿ ಕಠಿಣವಾದ ಸೂಕ್ಷ್ಮ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ಭಾರತ ದಂಡ ಸಂಹಿತೆಯ 188 ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದದ ಇತರ ಕಾನೂನು ಉಪಬಂಧಗಳಡಿಯಲ್ಲಿನ ಕಾನೂನು ಕ್ರಮದ ಜೊತೆಗೆ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51 ರಿಂದ 60ರನ್ವಯ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದೆಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top