ದಾವಣಗೆರೆ: ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ, ಬಸ್‍ಸ್ಟ್ಯಾಂಡ್, ರೈಲು ನಿಲ್ದಾಣ, ಮಾರುಕಟ್ಟೆ, ಮಾಲ್‍ಗಳು ಮತ್ತು ಹೋಟೆಲ್‍ಗಳಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಜೇಷನ್ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು. ಕೋವಿಡ್-19 ಲಕ್ಷಣಗಳು ಕಂಡುಬಂದಲ್ಲಿ “ಸಮೀಪದ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕೋವಿಡ್-19 ತಪಾಸಣೆಯನ್ನು ಮಾಡಿಸಿಕೊಳ್ಳಬೇಕು.
ಧಾರ್ಮಿಕ ಕಾರ್ಯಕ್ರಮಗಳಾದ ಮದುವೆ ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೋವಿಡ್-19 ಕರ್ನಾಟಕ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಕೋವಿಡ್-19 ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರು ಪ್ರಿಕಾಷನರಿ ಡೋಸ್‍ನ್ನು ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ತೆಗೆದುಕೊಳ್ಳಬಹುದು ಎಂದು ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ||ದೇವರಾಜ್ ಪಿ ಪಟಿಗೆ ರವರು ಪ್ರಕಟಣೆಯಲ್ಲಿ ತಿಳಿದ್ದಾರೆ.



