ದಾವಣಗೆರೆ: ಜಿಲ್ಲೆಯಲ್ಲಿಂದು 186 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 377 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ದಾವಣಗೆರೆಯ ದೇವರಾಜ ಅರಸು ಬಡಾವಣೆಯ 76 ವರ್ಷದ ವೃದ್ಧೆ ಸಾವನ್ನಪ್ಪಿದ್ಧಾರೆ. ಇಂದು ದಾವಣಗೆರೆ 55, ಹರಿಹರ 22, ಜಗಳೂರು 26, ಚನ್ನಗಿರಿ 18, ಹೊನ್ನಾಳಿ 58, ಹೊರ ಜಿಲ್ಲೆಯಿಂದ ಬಂದ 07 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 2,009 ಸಕ್ರಿಯ ಪ್ರಕರಣಗಳಿವೆ.