ದಾವಣಗೆರೆ: ನಗರದ 70 ವರ್ಷದ ವೃದ್ಧರಲ್ಲಿ ಕೊರೊನಾ ಪತ್ತೆಯಾಗಿದೆ. ಅವರು, ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಹೀಗಾಗಿ ಪರೀಕ್ಷೆಗೆ ಒಳಪಡಿಸಿದಾ ಕೋವಿಡ್ ಪತ್ತೆಯಾಗಿದೆ.ಈ ವೈರಸ್ ಹೊಸ ಜೆಎನ್-1 ತಳಿಯಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಡಿ.25ರಂದು 97 ಜನರನ್ನು ಪರೀಕ್ಷೆಗೆ ಒಳಪಡಿಸಿದಾಗ ಒಂದು ಪ್ರಕರಣ ಪತ್ತೆಯಾಗಿದೆ. ಡಿ.26ರಂದು 180 ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲಾ ನೆಗೆಟಿವ್ ಬಂದಿವೆ. ಕೊರೊನಾ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಇಲ್ಲ. ಎಚ್ಚರಿಕೆಯಿಂದ ಇರಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.



