ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಲಸಿಕೆ ಕೊರತೆ ಎದುರಾಗಿದ್ದು, ಜಿಲ್ಲೆಗೆ ಸಮರ್ಪಕವಾಗಿ ಲಸಿಕೆ ಪೂರೈಕೆಯಾಗದ ಹಿನ್ನೆಲೆ ಸಂಸದ ಜಿ.ಎಂ ಸಿದ್ದೇಶ್ವರ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ತಕ್ಷಣ ಜಿಲ್ಲೆಗೆ ಲಸಿಕೆ ನೀಡಬೇಕು. ಇಲ್ಲವಾದಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸೇರಿ ಸಿಎಂ ಮನೆ ಮುಂದೆ ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಲಸಿಕೆ ಸಿಗದೇ ಜನರು ಪರದಾಡುತ್ತಿದ್ದಾರೆ. ಜಿಲ್ಲೆಗೆ 40-50 ಸಾವಿರ ಲಸಿಕೆ ಅಗತ್ಯವಿದೆ. ಆದರೆ ಸರ್ಕಾರ ಕೆಲವೇ 10 ಸಾವಿರ ಲಸಿಕೆ ಮಾತ್ರ ನೀಡಲಾಗಿದೆ ಎಂದು ಸಂಸದರು ಕಿಡಿಕಾರಿದರು.



