ದಾವಣಗೆರೆ: ಕೋವಿಡ್ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ ಲಸಿಕಾಕರಣಕ್ಕೆ ಹೆಚ್ಚಿನ ವೇಗ ನೀಡಲಾಗಿದ್ದು, ಇದಕ್ಕಾಗಿ ಡಿ. 29 ರಂದು ತಾಲ್ಲೂಕಿನಲ್ಲಿ ಒಟ್ಟು 10 ಸಾವಿರ ಕೋವಿಶೀಲ್ಡ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ.
ಬುಧವಾರದಂದು ದಾವಣಗೆರೆ ನಗರದಲ್ಲಿರುವ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಎಲ್ಲ ನಗರ ಆರೋಗ್ಯ ಉಪಕೇಂದ್ರಗಳು ಅಲ್ಲದೆ ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಶೀಲ್ಡ್ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಇದುವರೆಗೂ ಒಂದೂ ಡೋಸ್ ಲಸಿಕೆ ಪಡೆಯದವರು ಹಾಗೂ ಮೊದಲನೆ ಡೋಸ್ ಪಡೆದು, ನಿಗದಿತ ಅವಧಿ ಮುಗಿದಿರುವವರು ಎರಡನೆ ಡೋಸ್ ಲಸಿಕೆಯನ್ನು ತಪ್ಪದೆ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.