Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ 18,500 ಬೂಸ್ಟರ್ ಡೋಸ್ ಲಸಿಕೆ ಲಭ್ಯ

covishild

ದಾವಣಗೆರೆ

ದಾವಣಗೆರೆ: ನಾಳೆ 18,500 ಬೂಸ್ಟರ್ ಡೋಸ್ ಲಸಿಕೆ ಲಭ್ಯ

ದಾವಣಗೆರೆ: ದಾವಣಗೆರೆ ತಾಲ್ಲೂಕಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಳೆ (ಜ.18) 15 ಸಾವಿರ ಬೂಸ್ಟರ್ ಡೋಸ್ ಲಸಿಕೆ ಲಭ್ಯವಿದೆ.ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಇದುವರೆಗೂ ಎರಡನೆ ಡೋಸ್ ಲಸಿಕೆ ಪಡೆಯುವುದು ಬಾಕಿ ಇರುವವರು ಹಾಗೂ 2ನೇ ಡೋಸ್ ಪಡೆದು 09 ತಿಂಗಳು ಪೂರ್ಣಗೊಂಡಿರುವ ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಲಸಿಕೆಯನ್ನು ಕೂಡಲೆ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಪಡೆದುಕೊಳ್ಳುವಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ಮನವಿ ಮಾಡಿದ್ದಾರೆ.

ಚಿಗಟೇರಿ ಜಿಲ್ಲಾ ಆಸ್ಪತ್ರೆಯೂ ಸೇರಿದಂತೆ ಎಲ್ಲ ನಗರ ಆರೋಗ್ಯ ಕೇಂದ್ರಗಳಿಗೆ ಒಟ್ಟು 7500 ಡೋಸ್ ಕೋವಿಶೀಲ್ಡ್ ಮತ್ತು 3500 ಡೋಸ್ ಕೋವ್ಯಾಕ್ಸಿನ್ ಹಾಗೂ ಗ್ರಾಮೀಣ ಪ್ರದೇಶಗಳಿಗೆ 7500 ಡೋಸ್ ಕೋವಿಶೀಲ್ಡ್ ಲಸಿಕೆ ಹಂಚಿಕೆ ಮಾಡಲಾಗಿದೆ.

ಮೊದಲನೆ ಲಸಿಕೆ ಪಡೆದು ನಿಗದಿತ ಅವಧಿ ಪೂರ್ಣಗೊಂಡಿದ್ದರೂ, ತಾಲ್ಲೂಕಿನಲ್ಲಿ ಅದರಲ್ಲೂ ದಾವಣಗೆರೆ ನಗರದಲ್ಲಿ ಬಹಳಷ್ಟು ಜನ ಎರಡನೆ ಡೋಸ್ ಲಸಿಕೆಯನ್ನು ಪಡೆಯದೇ ನಿರ್ಲಕ್ಷ್ಯ ತೋರುತ್ತಿರುವುದು ಕಂಡುಬಂದಿರುತ್ತದೆ. ದಾವಣಗೆರೆ ತಾಲ್ಲೂಕಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು, ಇಂತಹವರು ತಪ್ಪದೆ ಕೂಡಲೆ ಸಮೀಪದ ಆರೋಗ್ಯ ಕೇಂದ್ರದಲ್ಲಿ ಎರಡನೆ ಡೋಸ್ ಲಸಿಕೆಯನ್ನು ಪಡೆದುಕೊಳ್ಳಬೇಕು.

ಸರ್ಕಾರದ ಸೂಚನೆಯಂತೆ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ತಾಲ್ಲೂಕಿನ ಎಲ್ಲ ಗ್ರಾಮೀಣ ಮತ್ತು ನಗರ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿದ್ದು, ಎರಡನೆ ಡೋಸ್ ಪಡೆದು 9 ತಿಂಗಳು ಪೂರ್ಣಗೊಂಡವರು ಬೂಸ್ಟರ್ ಡೋಸ್ ಲಸಿಕೆಯನ್ನು ತಪ್ಪದೆ ಪಡೆದುಕೊಳ್ಳಬೇಕು ಎಂದು ಡಾ. ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top