ದಾವಣಗೆರೆ: ಕೋವಿಡ್-19 ನಾಲ್ಕನೇ ಅಲೆಯ ಪ್ರಯುಕ್ತ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಧಾರ್ಮಿಕ ಮತ್ತು ಮದುವೆ ಇನ್ನಿತರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು.
ಸಾರ್ವಜನಿಕರು ಕೋವಿಡ್-19 ಲಕ್ಷಣಗಳು ಕಂಡು ಬಂದಲ್ಲಿ ಶೀಘ್ರವೇ ಹತ್ತಿರ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ತಪಾಸಣೆಯನ್ನು ಉಚಿತವಾಗಿ ಮಾಡಿಸಿಕೊಂಡು ವೈದ್ಯರ ಸಲಹೆಯನ್ನು ಪಡೆದುಕೊಳ್ಳುವುದು. ಕೋವಿಡ್-19 ಲಸಿಕೆಯನ್ನು ಪಡೆಯುವುದು, ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಎರಡನೇ ಡೋಸ್ ಪಡೆಯದೇ ಇರುವ ಫಲಾನುಭವಿಗಳು ಮತ್ತು 60 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳು ಪ್ರಿಕಾಷನರಿ ಡೋಸನ್ನು ಎಲ್ಲಾ ಗ್ರಾಮೀಣ ಮತ್ತು ನಗರ ಆರೋಗ್ಯ ಕೇಂದ್ರಗಳಲ್ಲಿ ತೆಗೆದುಕೊಳ್ಳಬೇಕು. 12-18 ವಯೋಮಾನದ ಮಕ್ಕಳು ತಪ್ಪದೇ ಕೋವಿಡ್-19 ಮೊದಲನೇ ಮತ್ತು ಎರಡನೇ ಲಸಿಕೆಯನ್ನು ಅವರವರ ಶಾಲೆಯಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.